ಮುಖ್ಯಾಂಶಗಳು

. ದೇಶಾದ್ಯಂತ ಬಾರಿ ವಿವಾದ ಸೃಷ್ಟಿಸಿರುವ ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ.

. ಸಂಸತ್ ಭವನ ಚಲೋ ಹಮ್ಮಿಕೊಂಡಿದ್ದ ಪ್ರತಿಭಟನಾಕಾರರನ್ನು ತಡೆದ ಹಿನ್ನೆಲೆಯಲ್ಲಿ ಪ್ರಧಾನಿ ನಿವಾಸದ ಮುಂದೆ. ಕಾಂಗ್ರೆಸ್ ನಾಯಕರ ದಿಡೀರ್  ಧರಣಿ

 ಪೊಲೀಸ್  ವರ್ಷದಲ್ಲಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಿಡುಗಡೆ.

. ಕೇಂದ್ರ ಸರಕಾರದ ಸರ್ವಾಧಿಕಾರಿ ಧೋರಣೆ ವಿರುದ್ಧ ದೆಹಲಿಯಲ್ಲಿ ಗುಡುಗಿದ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್’

ಸಂಪೂರ್ಣ ವರದಿ(Full News body): 

  ನವದೆಹಲಿ: ದೇಶದ ವೈದ್ಯಕೀಯ ಶಿಕ್ಷಣ  ಪ್ರವೇಶಾತಿಯಲ್ಲಿ ನಡೆದಿರುವ ನೀಟ್ ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಈಗ ದೇಶದ ರಾಜಧಾನಿಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ಬಾರಿ ಆಕ್ರೋಶ ವ್ಯಕ್ತಪಡಿಸಿದ್ದು, ದೆಹಲಿಯ ಜಂತರ್ ಮಂತರ್ ಪ್ರದೇಶ ರಣರಂಗವಾಗಿ ಮಾರ್ಪಟ್ಟಿದೆ.

 ಪ್ರಧಾನಿ ನಿವಾಸದ ಮುಂದೆ ದಿಢೀರ್ ಪ್ರತಿಭಟನೆ ರಾಹುಲ್ ಗಾಂಧಿ ಬಂಧನ ಮತ್ತು ಬಿಡುಗಡೆ:

 ದೇಶದ ವಿವಿಧ ಭಾಗಗಳಿಂದ ದೆಹಲಿಗೆ ಆಗಮಿಸಿದ್ದ ಸಾವಿರಾರು ವಿದ್ಯಾರ್ಥಿಗಳು ಮತ್ತು ನಾಗರಿಕ ಹಕ್ಕುಗಳ ಹೋರಾಟಗಾರರು(cjp) ಸಂಸತ್ ಭವನದತ್ತ ಮೆರವಣಿಗೆ ಹೊರಟಿದ್ದರು ಆದರೆ ದೆಹಲಿ ಪೊಲೀಸರು ಪ್ರತಿಭಟ ನಕಾರರನ್ನು ಜಂತರ್ ಮಂತರ್ ನಲ್ಲಿ ಬೇರಿ ಕೇಟ್ಗಳನ್ನು   ಹಾಕಿ ತಡೆದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ತೀವ್ರ ತಳ್ಳಾಟ ನೌಕಾಟ ನಡೆಯಿತು. ಪೊಲೀಸರ ಈ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕರ ರಾಹುಲ್ ಗಾಂಧಿ ಅವರು ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರ ನಿವಾಸದ ಮುಂಭಾಗಕ್ಕೆ ತೆರಳಿ ರಸ್ತೆಯಲ್ಲಿ ಕುಳಿತು ಧರಣಿ ಆರಂಭಿಸಿದರು .

ರಾಹುಲ್ ಗಾಂಧಿ ಅವರ ದಿಡೀರ್ ನಡೆದ ಪೊಲೀಸ್ ಮತ್ತು ಭದ್ರತಾ ಸಿಬ್ಬಂದಿಯನ್ನು ಸಂಪೂರ್ಣವಾಗಿ ಕಂಗಲಾಗಿತ್ತು. ತಕ್ಷಣವೇ ಕಾರ್ಯ ಪ್ರವೃತ್ತಿರಾದ ಪೊಲೀಸರು ರಾಹುಲ್ ಗಾಂಧಿ ಹಾಗೂ ಪ್ರಿಯಂಕ ಗಾಂಧಿ ಸೇರಿದಂತೆ ಹಲವು ಹಿರಿಯರ ಕಾಂಗ್ರೆಸ್ ಸಂಸದ ರನ್ನು ಬಲವಂತವಾಗಿ ಎಳೆದಾಡಿ ಪೊಲೀಸ್ ವಾಹನಕ್ಕೆ ತುಂಬಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ತೀವ್ರ ಘೋಷಣೆಗಳನ್ನು. ಗೆಲುವು ಗಂಟೆಗಳ ಕಾಲ ಪೊಲೀಸ್ ಕಾವಲಿನಲ್ಲಿದ್ದ ರಾಹುಲ್ ಗಾಂಧಿ ಅವರನ್ನು ನಂತರ ಬಿಡುಗಡೆ ಮಾಡಲಾಯಿತು.

 ಕೇಂದ್ರದ ವಿರುದ್ಧ ಗುಡುಗಿದ ಡಿಕೆ ಶಿವಕುಮಾರ್:

 ದೆಹಲಿಯಲ್ಲಿ ನಡೆದ ಈ  ಹೈಡ್ರಾಮದ ನ್ನಲ್ಲೇ
ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗಿ ನಡೆಸಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರಕ್ಕೆ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ಇಲ್ಲ. ದೇಶದ ಇತಿಹಾಸದಲ್ಲೇ ಇಷ್ಟೊಂದು ದೊಡ್ಡ ಪ್ರಮಾಣದ ಶಿಕ್ಷಣ ಹಗರಣ ನಡೆದಿದ್ದರೂ ಪ್ರಧಾನಿಯವರು ಮೌನವಹಿಸಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಯುತ್ತಿದ್ದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಬಲವಂತವಾಗಿ ಬಂದಿಸಿರುವುದು  ಕೃತ್ಯವಾಗಿದೆ ಎಂದು ಅಕ್ರೋಶ ಹೊರಹಾಕಿದ್ದಾರೆ. 

“ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತುವರನ್ನು ಜೈಲಿಗೆ ಹಾಕುವುದು ನಿಮ್ಮ ಆಡಳಿತದ ವೈಖರಿಯೇ?  ಎಂದು ಡಿಕೆ ಶಿವಕುಮಾರ್ ಅವರು ಕೇಂದ್ರ ಗೃಹ ಸಚಿವಾಲಯ ಹಾಗೂ ಪ್ರಧಾನಿ ಮೋದಿ ಅವರನ್ನು ನೇರವಾಗಿ ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ ಈ ಹೋರಾಟ ತಾರ್ಕಿಕ ಅಂತ್ಯ ಕಾಣುವವರೆಗೂ ಕಾಂಗ್ರೆಸ್ ವಿದ್ಯಾರ್ಥಿಗಳಿಗೆ ನಿಲ್ಲಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 ವಿದ್ಯಾರ್ಥಿಗಳ ಆಕ್ರೋಶ ಮತ್ತು ಭದ್ರತೆ ಹೆಚ್ಚಳ:

 ಇತ್ತ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಹಗಲು ರಾತ್ರಿ ಧರಣಿ ಮುಂದುವರಿದಿದೆ. ಇಡೀ ದೇಶದ ಗಮನ ಸೆಳೆದಿರುವ ಈ ಹೋರಾಟದಲ್ಲಿ ಕಣ್ಣೀರು ಹಾಕಿದ ವಿದ್ಯಾರ್ಥಿಗಳು, ವರ್ಷಗಟ್ಟಲೆ ಕಷ್ಟಪಟ್ಟು ಓದಿದ ನಮಗೆ ಈ ವ್ಯವಸ್ಥೆ ದ್ರೋಹ ಮಾಡಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯ ಸಂಸತ್ ಭವನ, ಪ್ರಧಾನಿ ನಿವಾಸ ಹಾಗೂ ಪ್ರಮುಖ ರಸ್ತೆಗಳಲ್ಲಿ ಭದ್ರತೆಯನ್ನು ನಾಲ್ಕು ಪಟ್ಟು ಹೆಚ್ಚಿಸಲಾಗಿದೆ.